ರಚಿತಾ ರಾಮ್ ಇಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಟಿ ರಚಿತಾ ರಾಮ್ ಕನ್ನಡದ ಬೇಡಿಕೆಯ ಹೀರೋಯಿನ್ಗಳ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ.
ಅವರು ಇಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರ ನಟನೆಯ ‘ಮ್ಯಾಟ್ನಿ’ ಹಾಗೂ ‘ಬ್ಯಾಡ್ ಮ್ಯಾನರ್ಸ್’ ರಿಲೀಸ್ಗೆ ರೆಡಿ ಆಗುತ್ತಿವೆ. ಈ ಚಿತ್ರದ ಯಶಸ್ಸಿಗಾಗಿ ಅವರು ಪ್ರಾರ್ಥನೆ ಮಾಡಿದ್ದಾರೆ. ‘ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಬಗ್ಗೆ ಹೇಳಿದ್ದರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು ಬಂದುಬಿಟ್ಟೆ’ ಎಂದಿದ್ದಾರೆ