ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತ ಹೃದಯವಿದ್ರಾವಕ ಘಟನೆಯಾಗಿದೆ. ಈ ದುಃಖದ ಸಮಯದಲ್ಲಿ, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳಿಗೆ ಆಡಳಿತ ಮಂಡಳಿಯಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಪುಣೆಗೆ ತೆರಳುತ್ತಿದ್ದ ವಿದರ್ಭ ಟ್ರಾವೆಲ್ಸ್‌ನ ಖಾಸಗಿ ಬಸ್‌ನಲ್ಲಿ ಬುಲ್ಧಾನ ಜಿಲ್ಲೆಯ ಪಿಂಪಲ್‌ಖುಟಾದಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಮತ್ತು ಹೃದಯ ವಿದ್ರಾವಕ ಘಟನೆಯಾಗಿದೆ. ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು, ಅವರನ್ನು ಸಿಂಧಖೇದರಾಜ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರ ಕುಟುಂಬಕ್ಕೆ ಸಿಎಂ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ. ಗಾಯಾಳುಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *