ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 44 ಜನರಲ್ಲಿ ಸೋಂಕು ಪತ್ತೆಯಾಗಿವೆ.

ಕೋವಿಡ್ ಸಕ್ರಿಯ ಪ್ರಕರಣಗಳು ಕೂಡ ಗಣನೀಯವಾಗಿ ಕಡಿಮೆಯಾಗಿದ್ದು, 1475 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇನ್ನು ದೇಶದಲ್ಲಿ ಈವರೆಗೆ 531908 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

44460942 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 102 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,39,431 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 22,765 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Leave a Reply

Your email address will not be published. Required fields are marked *