ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ದಿನಕ್ಕೊಂದು ರೂಪ ಪಡೆಯುತ್ತಿದೆ. ಕಳೆದೆರಡು ತಿಂಗಳಿನಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರಗಳಿಂದ ಬೇಸತ್ತು ಒಂದೆಡೆ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ
ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಪ್ರತ್ಯೇಕ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ವಿಷ್ಣುಪುರ ಹಾಗೂ ಚುರಾಚಂದಪುರ ಜಿಲ್ಲೆಗಳಲ್ಲಿ ಪ್ರತ್ಯೇಕ ಗುಂಡಿನದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಮೈತ್ರೇಯಿ ಪ್ರಾಬಲ್ಯ ಇರುವ ವಿಷ್ಣುಪುರದ ಖೋಯಿಜುಮಾಂತಬಿ ಪ್ರದೇಶದ ಗ್ರಾಮ ಸ್ವಯಂ ಸೇವಕರ ಮೇಲೆ ದಾಳಿ ನಡೆಸಲಾಗಿದೆ.
ತಕ್ಷಣ ಪೊಲೀಸರು ಸ್ಥಳಕ್ಕೆ ತಲುಪಿದ್ದು, ದಾಳಿಕೋರರನ್ನು ಸದೆಬಡಿದಿದ್ದಾರೆ. ಕೆಲವು ಕಡೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಇದೀಗ ಎಲ್ಲವೂ ಸಹಜ ಪರಿಸ್ಥಿತಿಯತ್ತ ಮರಳುತ್ತಿದೆ.