ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ರವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.
ಪ್ರವೀಣ್ ಕುಮಾರ್ ಹಾಗೂ ಅವರೊಂದಿಗಿದ್ದ ಪುತ್ರ ಅಪಾಯದಿಂದ ಪಾರಾಗಿದ್ದಾರೆ. ಇವರು ಉತ್ತರ ಪ್ರದೇಶದ ಮೀರತ್ ನಲ್ಲಿರುವ ತಮ್ಮ ಮನೆಗೆ ಮರಳುವ ವೇಳೆ ವೇಗವಾಗಿ ಬಂದ ಟ್ರಕ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.
ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ರವರು ಭಾರತದ ಪರ 6 ಟೆಸ್ಟ್, 68 ಏಕದಿನ ಹಾಗೂ 10 ಟಿ-20 ಪಂದ್ಯಗಳನ್ನು ಆಡಿದ್ದಾರೆ. ಹಾಗೆಯೇ 119 ಐಪಿಎಲ್ ಪಂದ್ಯಗಳಲ್ಲೂ ಆಡಿದ್ದಾರೆ.