ಮೈಸೂರು – ತಿ.ನರಸೀಪುರ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮೊದಲು ಮಣಿಕಂಠ ಹಾಗೂ ಸಂದೇಶ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಮತ್ತೆ ನಾಲ್ವರು ಆರೋಪಗಳ ಬಂಧನವಾಗಿದ್ದು, ಬಂಧಿತರ ಸಂಖ್ಯೆ 6ಕ್ಕೆ ಏರಿದೆ. ವೇಣುಗೋಪಾಲ್ ನಾಯಕನ ಕೊಲೆ ಪ್ರಕರಣದಲ್ಲಿ ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ಶಂಕರ್ ಅಲಿಯಾಸ್ ತುಪ್ಪ ಹಾಗೂ ಹ್ಯಾರೀಶ್, ಅನಿಲ್, ಮಂಜು ಎಂಬ ನಾಲ್ಕು ಆರೋಪಿಗಳ ಬಂಧನವಾಗಿದೆ.
ಇನ್ನು ತಿ.ನರಸೀಪುರದಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಮನೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಶಾಸಕ ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ್ ಅವರನ್ನು ಒಳಗೊಂಡ ತಂಡ ಭೇಟಿ ನೀಡಿದೆ.
ಮತ್ತೊಂದೆಡೆ ಬೆಳಗಾವಿಯ ಜೈನಮುನಿ ಕಾಮಕುಮಾರ್ ನಂದಿಮಹಾರಾಜ ಹತ್ಯೆ ಪರಿಶೀಲನೆಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ಮಹೇಶ್, ಶಾಸಕ ಅಭಯ್ ಪಾಟೀಲ್, ಈರಣ್ಣ ಕಪಾಡಿ, ಸಂಸದೆ ಮಂಗಳಾ ಸುರೇಶ್ ಅಂಗಡಿ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ, ಬೆಳಗಾವಿ ಜಿಲ್ಲಾಧ್ಯಕ್ಷ ಅನಿಲ್ ಬೆನಕೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ.ರಾಜೇಶ್ ನೇರ್ಲಿ, ಬೆಳಗಾವಿ ಗ್ರಾಮಾಂತರ ವಿಭಾಗದ ಅಧ್ಯಕ್ಷ ಸಂಜಯ್ ಪಾಟೀಲ್, ರಾಜ್ಯ ವಕ್ತಾರ ಎಂ.ಬಿ.ಜಿರಲಿ ಅವರನ್ನು ಒಳಗೊಂಡ ತಂಡ ತೆರಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.