ನವದೆಹಲಿ : ಮಣಿಪುರದಲ್ಲಿ ಮೇ 4ರಂದು ನಡೆದಿದ್ದ ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೃತ್ಯದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ. ಈ ಸಂಬಂಧ ವಿಡಿಯೊ ಜುಲೈ 19ರಂದು ಜಾಲತಾಣದಲ್ಲಿ ಸಾಕಷ್ಟು ಹಂಚಿಕೆಯಾಗಿತ್ತು.
ನಿರ್ದಿಷ್ಟ ಸಮುದಾಯದ ಜನರು, ಮತ್ತೊಂದು ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದ ಈ ವಿಡಿಯೊ ಬಹಿರಂಗವಾದ ಹಿಂದೆಯೇ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಮಣಿಪುರ ಸರ್ಕಾರದ ಶಿಫಾರಸು ಆಧರಿಸಿ ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ ಕೃತ್ಯದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು