ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಜೆಡಿಎಸ್ ವರಿಷ್ಟರು ಭಾಗಿಯಾಗಲಿದ್ದಾರೆ.
ಬಿಜೆಪಿ ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಬೆಂಬಲ ನೀಡುವ ಬಗ್ಗೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ , ಸೀಟು ಹಂಚಿಕೆ ಸೇರಿ ವಿವಿಧ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ.