ಹೈದರಾಬಾದ್: ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿದ್ಯುತ್ ಸ್ಪರ್ಶದಿಂದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ವಿಜಯ್ (25) ಮತ್ತು ಅಂಜಿತ್ (35) ಎಂದು ಗುರುತಿಸಲಾಗಿದೆ.
ಎಸ್ಸಿ ವಾಡಾದಲ್ಲಿ ಸಂಭವಿಸಿದ ಘಟನೆಯಲ್ಲಿ ಮತ್ತೊಬ್ಬ ಯುವಕ ಗಾಯಗೊಂಡಿದ್ದಾನೆ. 75ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದೆ.
ಮತ್ತೋರ್ವ ಯುವಕ ಚಕ್ರಿ (25) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೀತಕ್ಕ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.