ಬೆಂಗಳೂರು : ಬಿಜೆಪಿಗೆ ಬಿ.ವೈ.ವಿಜಯೇಂದ್ರ ಲಾಟರಿ ಅಧ್ಯಕ್ಷ 7 ತಿಂಗಳಲ್ಲಿ ಲಾಟರಿ ಹೊಡೆದು ಅಧ್ಯಕ್ಷರಾಗಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಲಿದೆ ಲಾಟರಿನಾ?
ಬಂಪರ್ ಲಾಟರಿನಾ ಅಂತ. ಎಲೆಕ್ಷನ್ ನಲ್ಲಿ ಲಾಟರಿ ಯಾರಿಗೆ ಎಂಬುದನ್ನು ನಮ್ಮ ಕಾರ್ಯಕರ್ತರು, ರಾಜ್ಯದ ಜನರು ನಿರ್ಧರಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ಸರ್ಕಾರ ಬಲಿಯಾಗಲಿದೆ ಎಂದು ಕಿಡಿಕಾರಿದ್ದಾರೆ.