ಸಾಕಷ್ಟು ಹಗ್ಗ ಜಗ್ಗಾಟದ ನಂತರ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರಫಡ್ನವಿಸ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಏಕ್‌ನಾಥ್‌ಶಿಂಧೆ ಮತ್ತು ಅಜಿತ್‌ಪವಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಫಡ್ನವಿಸ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನಾಳೆ ಸಂಜೆ ೫.೩೦ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭ ಮುಂಬೈ ನಗರದ ಆಜಾದ್ ಮೈದಾನದಲ್ಲಿ ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.
ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಬಿಜೆಪಿ ಫಡ್ನವಿಸ್‌ಹೆಸರು ಮುಂಚೂಣಿಯಲ್ಲಿದ್ದ ಕಾರಣ ಮಹಾರಾಷ್ಟ್ರ ಹಂಗಾಮಿ ಮುಖ್ಯಮಂತ್ರಿ ಶಿವಸೇನೆಯ ಶಿಂಧೆ ಬಣ ಮುಖ್ಯಸ್ಥ ಏಕ್‌ನಾಥ್ ಶಿಂಧೆ ಅವರು ನೂತನ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫಡ್ನವಿಸ್ ಅವರು ತಡರಾತ್ರಿ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ವರ್ಷಾದಲ್ಲಿ ಶಿಂಧೆ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಕಳೆದವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಈ ಇಬ್ಬರು ನಾಯಕರು ಇದೇ ಮೊದಲ ಬಾರಿಗೆ ಭೇಟಿಯಾಗಿದ್ದರು.