ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಂಜೆ 5-30ಕ್ಕೆ ದಕ್ಷಿಣ ಮುಂಬೈಯ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಕೇಂದ್ರ ಸಚಿವರು, ಎನ್ ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ನೂತನ ಸಿಎಂ ಪದಗ್ರಹಣದ ಆಹ್ವಾನ ಪತ್ರಿಕೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೆಸರು ಇಲ್ಲದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹೌದು NCP ಯ ಆಹ್ವಾನ ಪತ್ರಿಕೆಯಲ್ಲಿ ನೂತನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಏಕನಾಥ್ ಶಿಂಧೆ ಅವರ ಹೆಸರೇ ಕಾಣುತ್ತಿಲ್ಲ.