ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಬಂಧಿಸಲಾಗಿದೆ.
ಈತನ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು 5ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್‌ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.
ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಹಚರರ ಸ್ಥಳಗಳ ಮೇಲೆ ಇತ್ತೀಚೆಗೆ ಎನ್‌ಐಎ ದಾಳಿ ಮಾಡಿ ದಾಖಲೆಗಳು ಜಪ್ತಿ ಮಾಡಿಕೊಂಡಿತ್ತು. ಕರ್ನಾಟಕ ಸೇರಿ ತಮಿಳುನಾಡಿನ 16 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದರು. ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಇಬ್ಬರು ಆರೋಪಿಗಳು ಆಶ್ರಯ ನೀಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿರುವ ಆರೋಪಿ ನೌಷದ್ ಮನೆ ಮೇಲೆ ಕೂಡ ಎನ್‌ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ದಾಳಿ ವಿಚಾರ ತಿಳಿದು ಮನೆ ಲಾಕ್ ಮಾಡಿ ಕುಟುಂಬ ಪರಾರಿ ಆಗಿತ್ತು. ನೌಷದ್ ಪತ್ತೆಗೂ ಎನ್?ಐಎ 2 ಲಕ್ಷ ರೂ. ರಿವಾರ್ಡ್ ಘೋಷಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಒಂದು ಕೊಲೆ ರಾಜ್ಯದಲ್ಲಿ ಬೆಚ್ಚಿ ಬೀಳಿಸಿತ್ತು. ಹಿಂದು ಪರ ಹೋರಾಟಗಾಗರು ಸ್ವತಃ ಬಿಜೆಪಿ ವಿರುದ್ದ ರೊಚ್ಚಿಗೇಳುವಂತೆ ಆಗಿತ್ತು ಅವತ್ತಿನ ಸ್ಥಿತಿ. ಎನ್?ಐಎ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ತನಿಖೆ ನಡೆಸುತ್ತಿದ್ದು, 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು. ಮಹಮ್ಮದ್ ಶರೀಫ್ ಸೇರಿದಂತೆ ಈವರೆಗೆ 20 ಜನರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *