ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಪ್ರಯೋಗಿಸಿದ ಹಿನ್ನಲೆಯಲ್ಲಿ ಬಂಧನಕ್ಕೊಳಪಟ್ಟಿದ್ದ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಕರಣದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶಿಸಿ ಬಣ ರಾಜಕೀಯಕ್ಕೆ ತಾತ್ಕಾಲಿಕ ವಿರಾಮ ನೀಡಿದೆ. ಕೆಲವೇ ದಿನಗಳ ಹಿಂದಷ್ಟೇ ಮನೆಯೊಂದು ಮೂರು ಬಾಗಿಲು ಎಂಬ ಸ್ಥಿತಿಯಲ್ಲಿದ್ದ ಬಿಜೆಪಿಯಲ್ಲಿ ಸಿ.ಟಿ.ರವಿ ಪ್ರಕರಣ ಎಲ್ಲವನ್ನೂ ಮರೆಸಿ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿರುವುದು ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿಸಿದೆ.

ರವಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ ಪಕ್ಷದ ಹಿರಿಯ ಮತ್ತು ಕಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಈ ಪ್ರಕರಣದಲ್ಲಿ ನಾವು ಒಗ್ಗಟ್ಟು ಪ್ರದರ್ಶಿಸದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಮನಗಂಡರು.

ಹೀಗಾಗಿಯೇ ಗುರುವಾರ ಸಂಜೆ 6.30ಕ್ಕೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸುತ್ತಿದ್ದಂತೆ ತಕ್ಷಣವೇ ಎಚ್ಚೆತ್ತುಕೊಂಡ ವಿಜಯೇಂದ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಉಪನಾಯಕ ಅರವಿಂದ್‌ ಬೆಲ್ಲದ್‌, ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್‌ ಸದಸ್ಯರಾದ ಕೇಶವಪ್ರಸಾದ್‌ ಸೇರಿದಂತೆ ಪಕ್ಷದ ಮುಖಂಡರ ಜೊತೆ ಚರ್ಚಿಸಿ ರವಿ ಅವರಿಗೆ ಸಂಪೂರ್ಣ ಬೆಂಬಲ ನೀಡಿ ಅವರ ಜೊತೆ ಇರುವಂತೆ ಸಲಹೆ ನೀಡಿದರು.

ರವಿ ಅವರನ್ನು ಬಂಧಿಸಿ ಪೊಲೀಸ್‌‍ ಜೀಪ್‌ನಲ್ಲಿ ಕರೆದೊಯ್ಯುತ್ತಿದ್ದಂತೆ ಅವರನ್ನೇ ಹಿಂಬಾಲಿಸಿದ ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಬೆಲ್ಲದ್‌ ಖಾನಾಪುರ ಠಾಣೆಗೆ ತೆರಳಿ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ದೂರು ಸಲ್ಲಿಸಿದರು

Leave a Reply

Your email address will not be published. Required fields are marked *