ಹೆಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್‌ ಗೋಯಲ್‌, ಹೆಚ್‌ಎಂಪಿವಿ ವೈರಸ್‌‍ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು ಎಂದು ಹೇಳಿದ್ದಾರೆ. ದೇಶದಲ್ಲಿ 2024ರ ಡಿಸೆಂಬರ್‌ನಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ. ಒಂದೊಮೆ ಸಮಸ್ಯೆ ಉಲ್ಬಣಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ. ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಭಾರತದಲ್ಲಿ ಈ ವೈರಸ್‌‍ ಪ್ರಕರಣ ಪತ್ತೆಯಾಗಿಲ್ಲ. ಚಳಿಗಾಲದಲ್ಲಿ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಭಾರತದ ಆರೋಗ್ಯ ವಿಭಾಗ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಹೀಗಾಗಿ ಜನರು ಆತಂಕಪಡುವ ಅವಶ್ಯಕತೆ ಇಲ್ಲ.

Leave a Reply

Your email address will not be published. Required fields are marked *