2025 ರಲ್ಲಿ, ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ವೈಯಕ್ತಿಕ ಜೀವನವು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಚರ್ಚೆಯಾಗಿದೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಬೇರೆಯಾಗಲು ನಿರ್ಧರಿಸಿದ್ದಾರೆ ಎಂಬ ವದಂತಿಗಳು ಹರಡಿವೆ. ಮಗಳು ಆರಾಧ್ಯ ಐಶ್ವರ್ಯ ಜೊತೆಗೆ ಅನೇಕ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆ, ಆದರೆ ಅಭಿಷೇಕ್ ಬಚ್ಚನ್ ಅಲ್ಲ. ಐಶ್ವರ್ಯಾ ಮತ್ತು ಅಭಿಷೇಕ್ ದಾಂಪತ್ಯ ಜೀವನ ಸರಿಯಾಗಿ ನಡೆಯುತ್ತಿಲ್ಲ ಎಂಬ ಚರ್ಚೆ ನಡೆದಿದೆ.ವಿಚ್ಛೇದನದ ಪಡೆಯಲಿದ್ದಾರೆ ಎಂಬ ಸುದ್ದಿಯಾಗಿತ್ತು.
ಆದರೆ 2025 ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಹೊಸ ವರ್ಷವನ್ನು ಒಟ್ಟಿಗೆ ಆಚರಿಸಿ ಮುಂಬೈಗೆ ಮರಳಿದ್ದಾರೆ. ಈ ಮೂಲಕ ತಮ್ಮ ವಿಚ್ಛೇದನದ ವದಂತಿಗಳಿಗೆ ತೀಲಾಂಜಲಿ ನೀಡಿದ್ದಾರೆ.ಜನವರಿ 4 ರಂದು ಬೆಳಿಗ್ಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಬ್ಬರೂ ಕಾಣಿಸಿಕೊಂಡಿದ್ದಾರೆ.
2025 ವರ್ಷ ಪ್ರಾರಂಭವಾಗುತ್ತಿದ್ದಂತೆ, ಅಭಿಷೇಕ್ ಮತ್ತು ಐಶ್ವರ್ಯಾ ಮಗಳು ಆರಾಧ್ಯ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋಗೆ ಸಾಮಾಜಿಕ ಜಾಲತಾಣ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.
ಈ ವಿಡಿಯೋವನ್ನು ಮಾನವ್ ಮಂಗ್ಲಾನಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಅಭಿಷೇಕ್ ಬಚ್ಚನ್ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ದೃಶ್ಯವಿದೆ. ಆದರೆ, ಅವರ ಹಿಂದೆ ಅವರ ಮಗಳು ಆರಾಧ್ಯ ಮತ್ತು ಪತ್ನಿ ಐಶ್ವರ್ಯ ಕಾಣಿಸಿಕೊಂಡಿದ್ದಾರೆ.