ಯಳಂದೂರು ಪಟ್ಟಣದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾವಿತ್ರಿ ಬಾಯಿ ಫುಲೆ ಜನ್ಮ ದಿನ ಜಯಂತಿ ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಆರ್. ನಂಜುಂಡಯ್ಯ ರವರು ಉದ್ಘಾಟಿಸಿ ಅವರು ಮಾತನಾಡಿ ದೇಶದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆ ಆರಂಭಿಸುವ ಮೂಲಕ ಮಹಿಳಾ ಶಿಕ್ಷಣ ಪದ್ಧತಿಗೆ ಸಾವಿತ್ರಿಬಾಯಿ ಫುಲೆ ಮುನ್ನುಡಿ ಬರೆದರು. ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತ ಮಾಡಿದ ಕಾಲದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಪರಿಣಾಮ ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿ ಸಾಧನೆ ಮಾಡಲು ಕಾರಣವಾಗಿದೆ,
‘ತೊಟ್ಟಿಲು ತೂಗುವ ಕೈಗಳು ದೇಶವನ್ನು ಮುನ್ನಡೆಸುತ್ತವೆ ಎಂಬ ಘೋಷಣೆಯೊಂದಿಗೆ ಸಾವಿತ್ರಿಬಾಯಿ ಫುಲೆ ಅವರು ಮಹಿಳಾ ಶಿಕ್ಷಣ ವ್ಯವಸ್ಥೆ ಜಾರಿಗಾಗಿ ಸಾಕಷ್ಟು ಹೋರಾಟ ಮಾಡಿದರು. ಪ್ರತಿವರ್ಷ ಫುಲೆ ಅವರ ಜನ್ಮದಿನವನ್ನು ‘ಶಿಕ್ಷಕಿಯರ ದಿನ’ವನ್ನಾಗಿ ಆಚರಿಸಿದಲ್ಲಿ ಹೆಚ್ಚಿನ ಅರ್ಥ ಸಿಗಲಿದೆ’ ಎಂದು ಸಲಹೆ ನೀಡಿದರು.
ನಂತರ ತಾಲೂಕಿನ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರಿಗೆ ಒಂದು ದಿನದ ಸಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಆರ್. ನಂಜುಂಡಯ್ಯ, ಬಿ ಆರ್ ಪಿ ಗಳಾದ ನಂಜುಂಡಸ್ವಾಮಿ, ರಂಗಸ್ವಾಮಿ, ಪುಷ್ಪಲತಾ, ಸತೀಶ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ನಂಜುಂಡಸ್ವಾಮಿ, ಚಂದ್ರಮ್ಮ ಸರ್ಕಾರಿ ನೌಕರ ಸಂಘದ ನಿರ್ದೇಶಕರಾದ ರಾಜು, ಅಜಿತ್ ಫೌಂಡೇಶನ್ ಸದಸ್ಯರಾದ ಮಂಜು, ಸಿ ಆರ್‌ಪಿ ಗಳಾದ ಭಾಗ್ಯ, ಭಾರತಿ, ಕೆ ಎಲ್ ದೊರೆಸ್ವಾಮಿ, ಹಾಗೂ ತಾಲೂಕಿನ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕಿಯರು ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ.ಎಸ್. ಪುಟ್ಟಸ್ವಾಮಿಹೊನ್ನೂರು

Leave a Reply

Your email address will not be published. Required fields are marked *